Latest

ಪುನೀತ್ ಅಂತ್ಯಕ್ರಿಯೆ ನಾಳೆ ನಡೆಸಲು ನಿರ್ಧಾರ; ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಇಡೀದಿನ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು. ನಾಳೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ರಾಜಕುಮಾರ್ ಕುಟುಂಬಸ್ಥರ ಜೊತೆಗೆ ಚರ್ಚಿಸಲಾಗಿದೆ ಎಂದರು.

Home add -Advt

ಅಭಿಮಾನಿಗಳು ಶಾಂತ ರೀತಿಯಿಂದ ಬಂದು ಅಂತಿಮ ದರ್ಶನ ಪಡೆಯಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಪುನೀತ್ ಮಗಳು ಅಮೆರಿಕಾದಿಂದ ಬರುತ್ತಿದ್ದಾರೆ. ಈಗಾಗಲೇ ದೆಹಲಿಗೆ ಬಂದಿಳಿದಿರುವ ಅವರು ಬೆಂಗಳೂರಿನತ್ತ ಪ್ರಯಾಣಿಸಿದ್ದು, ಸಂಜೆ 5 ಗಂಟೆ ವೇಳೆಗೆ ಬೆಂಗಳೂರು ತಲುಪಲಿದ್ದಾರೆ. ಆ ಬಳಿಕ ಅಂತಿಮ ವಿಧಿವಿಧಾನಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.
ದೇವರು ಯಾಕಿಂತ ಅನ್ಯಾಯ ಮಾಡಿದ…?; ಪುನೀತ್ ಅಂತಿಮ ದರ್ಶನ ಪಡೆದು ಗದ್ಗದಿತರಾದ ನಟ ನಂದಮೂರು ಬಾಲಕೃಷ್ಣ

Related Articles

Back to top button