ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂ ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಸಾಗರೋಪಾದಿಯಲ್ಲಿ ಅಭಿಮಾನಿಗಳು ಆಗಮಿಸಿ ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಪುನೀತ್ ಪಾರ್ಥೀವ ಶರೀರದ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮಧ್ಯಾಹ್ನ 3 ಗಂಟೆಗೆ ಕಂಠೀರವ ಸ್ಟೇಡಿಯಂ ನಿಂದ ಮೆರವಣಿಗೆ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ರೂಟ್ ಮ್ಯಾಪ್ ಸಿದ್ಧವಾಗಿದೆ.
ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸನ್ ಮ್ಯಾನರ್, ಕಾವೇರಿ ಜಂಕ್ಷನ್, ಸ್ಯಾಂಕಿ ಕೆರೆ, ಯಶವಂತಪುರ, ಗೋವರ್ಧನ್, ಗೊರಗುಂಟೆ ಪಾಳ್ಯ ಸಿಗ್ನಲ್ ಮೂಲಕವಾಗಿ ಮೆರವಣಿಗೆ ಸಾಗಲಿದೆ. ಬಳಿಕ ಸಂಜೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲಿಯೇ ಪುನೀತ್ ಅಂತ್ಯಕ್ರಿಯೆ ನೆರವೇರಲಿದೆ.
ಪುನೀತ್ ಹಿರಿಯ ಮಗಳು ಅಮೇರಿಕಾದಿಂದ ಆಗಮಿಸುತ್ತಿದ್ದು, ಮಧ್ಯಾಹ್ನ 4 ಗಂಟೆ ವೇಳೆಗೆ ಬೆಂಗಳೂರಿಗೆ ಬಂದು ತಲುಪಲಿದ್ದು, ಬಳಿಕ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳು ನರವೇರಲಿವೆ ಎಂದು ತಿಳಿದುಬಂದಿದೆ.
ಪುನೀತ್ ಸಾವಿನಿಂದ ಮನನೊಂದ ಅಭಿಮಾನಿ ಆತ್ಮಹತ್ಯೆ; ನೆಚ್ಚಿನ ನಟನನ್ನು ಕಳೆದುಕೊಂಡು ಶಾಕ್ ಗೆ ಹೃದಯಾಘಾತಕ್ಕೀಡಾದ ಮತ್ತೊಬ್ಬ ಅಭಿಮಾನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ