
ಪ್ರಗತಿವಾಹಿನಿ ಸುದ್ದಿ; ಮೈಸೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್, ಅಭಿಮಾನಿಗಳ ಆರಾಧ್ಯ ದೈವ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಮೈಸೂರು ವಿವಿ 102ನೇ ಘಟಿಕೋತ್ಸವ ಹಿನ್ನೆಲೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯ ಅಪ್ಪುಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಪುನೀತ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೌರವ ಡಾಕ್ಟರೇಟ್ ಸ್ವೀಕರಿಸಿದರು.
46 ವರ್ಷಗಳ ಹಿಂದೆ ಮೈಸೂರು ವಿಶ್ವ ವಿದ್ಯಾಲಯ ವರನಾ ಡಾ.ರಾಜ್ ಕುಮಾರ್ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಿತ್ತು. ಇಂದು ನಡೆದ ವಿವಿ ಘಟಿಕೋತ್ಸವ ಸಮಾರಂಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ಪತ್ನಿ ಮಂಗಳ, ನಟ ವಿನಯ್ ರಾಜ್ ಕುಮಾರ್, ನಟಿ ಧನ್ಯ ರಾಮ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಸದಸ್ಯರು ಭಾಗಿಯಾಗಿದ್ದರು.