Latest

ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪುನೀತ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button