Latest

ಅಪ್ಪು ಕನಸಿನ ’ಗಂಧದ ಗುಡಿ’ ಟೀಸರ್ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕರುನಾಡ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತು ನಿರ್ಮಿಸಿದ್ದ ಸಾಕ್ಷ್ಯಚಿತ್ರ ’ಗಂಧದ ಗುಡಿ’ ಟೀಸರ್ ಬಿಡುಗಡೆಗೊಂಡಿದೆ.

ಇಂದು ಪುನೀತ್ ತಾಯಿ ಪಾರ್ವತಮ್ಮ ರಾಜ್ ಕುಮಾರ್ ಜನ್ಮದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಪುನೀತ್ ರಾಜ್ ಕುಮಾರ್ ಅವರ ಕನಸಿನಂತೆ PRK ಆಡಿಯೋ ಮೂಲಕ ಗಂಧದ ಗುಡಿ ಡಾಕ್ಯುಮೆಂಟರಿಯ ಶೀರ್ಷಿಕೆ ಟೀಸರ್ ನ್ನು ಇಂದು ಬಿಡಿಗಡೆಗೊಳಿಸಲಾಯಿತು.

ಕರ್ನಾಟಕದ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯ ಚಿತ್ರ ತಯಾರಿಸಿ ಅದನ್ನು ಅಭಿಮಾನಿಗಳ ಮುಂದಿಡುವ ಮಹದಾಸೆಯನ್ನು ಪುನೀತ್ ರಾಜ್ ಕುಮಾರ್ ಹೊಂದಿದ್ದರು, ಆದರೆ ಅದಕ್ಕೂ ಮುನ್ನವೇ ಪುನೀತ್ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದರು. ಇದೀಗ ಪುನೀತ್ ಕನಸಿನಂತೆ ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ನ್ನು ಪುನೀತ್ ಪತ್ನಿ ಅಶ್ವಿನಿ ಹಾಗೂ ಕುಟುಂಬದವರು ರಿಲೀಸ್ ಮಾಡಿದ್ದು, ಅಪ್ಪು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಐವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

Home add -Advt

Related Articles

Back to top button