Latest

ಠಾಣೆಯಲ್ಲಿಯೇ ಕುಸಿದು ಬಿದ್ದ ಪುನೀತ್ ಕೆರೆಹಳ್ಳಿ; ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಬಂಧಿತರಾಗಿರುವ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಪೊಲೀಸ್ ಠಾಣೆಯಲ್ಲಿ ತೀವ್ರ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ವಿಚಾರಣೆ ವೇಳೆ ಪುನೀತ್ ಕೆರೆಹಳ್ಳಿ ತೀವ್ರ ಹೊಟ್ಟೆನೋವಿನಿಂದ ಕುಸಿದುಬಿದ್ದಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುರಿ ಮಾಂಸದ ಜೊತೆಗೆ ನಾಯಿ ಮಾಂಸವನ್ನು ರಾಜಸ್ಥಾನದಿಂದ ತಂದು ಮಾರಾಟ ಮಾಡಲಾಗುತ್ತಿದೆ ಎಂದು ಆರೊಪಿಸಿ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ಇದೀಗ ವಿಚಾರಣೆ ವೇಳೆ ಪುನೀತ್ ಕೆರೆಹಳ್ಳಿ ಏಕಾಏಕಿ ಅಸ್ವಸ್ಥರಾಗಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button