ಪ್ರಗತಿವಾಹಿನಿ ಸುದ್ದಿ; ಚಂಡೀಘಡ: ಪಂಜಾಬ್ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನವಜೋತ್ ಸಿಂಗ್ ಸಿಧು ಪತ್ರ ಬರೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ, ರಾಜಿ ಮಾಡಿಕೊಳ್ಳುವುದರಿಂದ ಮನುಷ್ಯನ ವ್ಯಕ್ತಿತ್ವದ ಕುಸಿತಕ್ಕೆ ಕಾರಣವಾಗುತ್ತದೆ. ಪಂಜಾಬ್ ನ ಭವಿಷ್ಯ ಹಾಗೂ ಸಿಂದ್ಧಾಂತಗಳ ಜೊತೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಈ ವಿಚಾರ ಮಾಜಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ಗೆ ಅಸಮಾಧಾನವಿತ್ತು. ನಂತರದ ಬೆಳವಣಿಗೆಯಲ್ಲಿ ಅಮರಿಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಚರಣ್ ಜಿತ್ ಸಿಂಗ್ ಚನ್ನಿ ನೂತನ ಸಿಎಂ ಆಗಿ ಆಯ್ಕೆಯಾಗಿದ್ದು, ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಈಗ ಸಿಧು ರಾಜೀನಾಮೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ