
ಪ್ರಗತಿವಾಹಿನಿ ಸುದ್ದಿ; ಲುಧಿಯಾನ: ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿಎಂ ಅಭ್ಯರ್ಥಿ ಹೆಸರನ್ನು ಘೋಷಿಸಿದ್ದು, ಹಾಲಿ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿದೆ.
ಲುಧಿಯಾನಾದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಪಕ್ಷದ ನಾಯಕ ರಾಹುಲ್ ಗಾಂಧಿ, ಚನ್ನಿ ಅವರೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿದರು. ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಹೈಕಮಾಂಡ್ ಶಾಕ್ ನೀಡಿದೆ.
ಪಂಜಾಬ್ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ನವಜೋತ್ ಸಿಂಗ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಅಲ್ಲದೇ ಹಿಂದಿನ ಸಿಎಂ ಆಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆಗೂ ಪ್ರಮುಖ ಕಾರಣರಾಗಿದ್ದರು. ಆದರೆ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಂಜಾಬ್ ಹಾಲಿ ಸಿಎಂ ಆಗಿರುವ ಚರಣ್ ಜಿತ್ ಸಿಂಗ್ ಚನ್ನ ಅವರೇ ಕಾಂಗ್ರೆಸ್ ನ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪೊಲೀಸ್ ಶಾಲೆಗಳನ್ನು ಆತ್ಮರಕ್ಷಣಾ ತರಬೇತಿಗೆ ಬಳಕೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ




