Latest

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವುದಿಲ್ಲ: ಆಪ್ ಸಿಎಂ ಅಭ್ಯರ್ಥಿ ಘೋಷಣೆ, CM ಪ್ರಮಾಣವಚನ ಸ್ಥಳ ಎಲ್ಲಿ?

ಪ್ರಗತಿವಾಹಿನಿ ಸುದ್ದಿ; ಚಂಡೀಘಡ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಈ ನಡುವೆ ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅಚ್ಚರಿ ಘೋಷಣೆಯೊಂದನ್ನು ಮಾಡಿದ್ದಾರೆ.

ಚಂಡೀಗಢದಲ್ಲಿ ವಿಜಯೋತ್ಸವ ಭಾಷಣ ಮಾಡಿದ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಭಗವಂತ್ ಮಾನ್, ಹಾಲಿ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿದ್ದಾರೆ. ಭ್ರಷ್ಟಾಚಾರಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಪಂಜಾಬ್ ನ ಕಾಮನ್ ಮ್ಯಾನ್ ನಂತೆ ನಾನು ಕೆಲಸ ಮಾಡುತ್ತೇನೆ. ನಾನು ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಡುವುದಿಲ್ಲ. ಬದಲಾಗಿ ಭಗತ್ ಸಿಂಗ್ ಹುಟ್ಟೂರಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಘೋಷಿಸಿದರು.

ಭಗತ್ ಸಿಂಗ್ ಹುಟ್ಟೂರಾದ ಖಟ್ಕರ್ ಕಾಲ್ ಗ್ರಾಮದಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ. ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಭಗತ್ ಸಿಂಗ್ ಕನಸನ್ನು ಜನರು ನನಸು ಮಾಡಿದ್ದಾರೆ ಎಂದು ಹೇಳಿದರು.

Home add -Advt

ಇದೇ ವೇಳೆ ಪಂಜಾಬ್ ನ ಸರ್ಕಾರಿ ಕಚೇರಿಗಳಲ್ಲಿ ಇನ್ನುಮುಂದೆ ಸಿಎಂ ಫೋಟೋಗಳನ್ನು ಇಡುವಂತಿಲ್ಲ, ಸ್ವಾತಂತ್ರ್ಯ ಹೋರಾಟಗಾರರು, ಭಗತ್ ಸಿಂಗ್, ಅಂಬೇಡ್ಕರ್ ಫೋಟೋಗಳನ್ನು ಮಾತ್ರ ಇಡಬೇಕು ಎಂದು ಆಪ್ ಆದೇಶ ನೀಡಿದೆ.

ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆ ಹಾದಿ ಸುಗಮ

Related Articles

Back to top button