Latest

ಪಂಜಾಬ್ ನಲ್ಲಿ ಆಮ್ ಆದ್ಮಿ ಸರ್ಕಾರ ಖಚಿತ

ಪ್ರಗತಿವಾಹಿನಿ ಸುದ್ದಿ; ಪಂಜಾಬ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ನಿಚ್ಚಳ ಬಹುಮತ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ.

ಕಾಂಗ್ರೆಸ್ ನ ಆಂತರಿಕ ಜಗಳವೇ ಹಿನ್ನಡೆಗೆ ಕಾರಣವಾಗಿದ್ದು, ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಾದ ಚಮಕ್ ಪುರ್ ಸಾಹಿಬ್ ಹಾಗೂ ಭಾದೌರ್ ಕ್ಷೇತ್ರಗಳಲ್ಲಿ ಹಿನ್ನಡೆಯನುಭವಿಸಿದ್ದಾರೆ.

Home add -Advt

ಪಂಜಾಬ್ ನ 117 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 13 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂದಿದ್ದರೆ, ಆಮ್ ಆದ್ಮಿ ಪಕ್ಷ 89 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಯತ್ತ ದಾಪುಗಾಲಿಟ್ಟಿದೆ.

ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ಆದಿತ್ಯನಾಥ್ ಸರ್ಕಾರ

Related Articles

Back to top button