Latest

*ಬಿಜೆಪಿ ಕಾರ್ಯಕರ್ತರು ಮೈಮರೆತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಸಂಸದ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಮೈಮರೆತರೆ ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಬಿಜೆಪಿ ಕಾರ್ಯಕರ್ತರು ಎಚ್ಚರಾಗಿದ್ದು ಕೆಲ ಮಾಡಬೇಕು. ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದೆ. ಬಿಜೆಪಿ ಕಾರ್ಯಕರ್ತರು ಮೈಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಪಿಎಫ್ ಐ ಹಾಗೂ ಕೆ ಎಫ್ ಡಿಯ 175 ಸದಸ್ಯರ ಮೇಲಿದ್ದ ಕೇಸ್ ವಾಪಸ್ ಪಡೆದಿದ್ದರು. ಸಿದ್ದರಾಮಯ್ಯ ಮತ್ತೆ ಸಿಎಂ ಅಗಲು ಹವಣಿಸುತ್ತಿದ್ದಾರೆ. ಬೀಗರೂಟ, ಬಾಡೂಟ, ಮದುವೆ, ಮುಂಜಿಗೆ ಎಂದು ಆಗಗಾ ಮೈಸೂರಿಗೆ ಬರುತ್ತಿದ್ದಾರೆ. ಒಂದು ವೇಳೆ ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ವಿವಾದಾತ್ಮಕ ಮಾತನಾಡಿದ್ದಾರೆ.

*ಕಾಂಗ್ರೆಸ್ ನಿಂದ ಮತ್ತೊಂದು ಮಹತ್ವದ ಘೋಷಣೆ*

Home add -Advt

https://pragati.taskdun.com/d-k-shivakumarcongress10kg-free-raice-pressmeetsiddaramaiah/

 

Related Articles

Back to top button