Latest

ಪುರಿ ಜಗನ್ನಾಥ ಮಂದಿರದ 404 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಪುರಿ: ದೇಶಾದ್ಯಂತ ಕೊರೊನಾ ಮಹಾಮಾರಿ ಹೆಚ್ಚುತ್ತಿದ್ದು, ವಿಶ್ವವಿಖ್ಯಾತ ಪುರಿ ಜಗನ್ನಾಥ ಮಂದಿರದ 351 ಸೇವಕರು ಹಾಗೂ 53 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ದೇವಾಲಯದ ಆಡಳಿತಾಧಿಕಾರಿ ಅಜಯ್ ಜೇನಾ ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಇಲ್ಲಿಯವರೆಗೆ ದೇವಾಲಯದ 404 ಜನರಿಗೆ ಕೊವಿಡ್ ಪಾಸಿಟೀವ್ ಬಂದಿದೆ. ಸೋಂಕು ದೃಢಪಟ್ಟ ಸೇವಕರು ಹಾಗು ಸಿಬ್ಬಂದಿಗಳು ಪ್ರತ್ಯೇಕವಾಗಿ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Home add -Advt

ಇನ್ನು ಪುರಿ ಜಿಲ್ಲೆಯೊಂದರಲ್ಲೇ ಈವರೆಗೆ 9.704 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 52 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಪುರಿ ಮುನಿಸಿಪಾಲಿಟಿಯೊಂದರಲ್ಲೇ 1,255 ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ.

Related Articles

Back to top button