Film & EntertainmentNational

*ಖ್ಯಾತ ನಟ ಅಲ್ಲು ಅರ್ಜುನ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೈದರಾಬಾದ್ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಕರೆದೊಯ್ದಿದ್ದಾರೆ.

‘ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್‌ ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39)ಎಂಬ ಮಹಿಳೆಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಥಿಯೆಟರ್ ಮಾಲೀಕ ಹಾಗೂ ಇಬ್ಬರು ವ್ಯವಸ್ಥಾಪಕರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button