Latest

ವಿಜ್ಞಾನಿ, ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಆರ್ ಡಿಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

ತೀವ್ರ ಹೃದಯಾಘಾತ ಸಂಭವಿಸಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸುದೀಂದ್ರ ಹಾಲ್ದೊಡ್ಡೇರಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 2ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

Home add -Advt

ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಕುಟುಂಬದವರು ಅವರ ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ರೋಟರಿ ಕ್ಲಬ್ ನಿಂದ ಸಾಧಕ ವೈದ್ಯರು, ಚಾರ್ಟರ್ಡ್ ಅಕೌಂಟಂಟ್ ಗಳಿಗೆ ಸನ್ಮಾನ

Related Articles

Back to top button