Latest

ಕ್ವಾರಂಟೈನ್ ನಲ್ಲಿರುವವರು ತಪ್ಪಿಸಿಕೊಳ್ಳದಂತೆ ಟ್ಯಾಗ್ ವ್ಯವಸ್ಥೆ ಜಾರಿ

ಪ್ರಗತಿವಾಹಿನಿ ಸುದ್ದಿ;ಬೆಂಗಳೂರು: ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ಕೊರೊನಾ ರೋಗಿಗಳು ಮತ್ತು ಕ್ವಾರಂಟೈನ್ ನಲ್ಲಿರುವವರ ಕೈಗೆ ಟ್ಯಾಗ್ ಕಟ್ಟಲಾಗುತ್ತದೆ. ಇದರಿಂದ ಅವರ ಚಲನವಲನದ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಕ್ವಾರಂಟೈನ್ ನಲ್ಲಿರುವವರು, ಕೊರೊನಾ ಸೋಂಕಿತರು ತಪ್ಪಿಸಿಕೊಂಡು ಹೋಗುತ್ತಿರುವ ಪ್ರಕರಣಗಳನ್ನ ತಡೆಯಲು ಕೆಲವೇ ದಿನಗಳಲ್ಲಿ ಟ್ಯಾಗ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದರು.

ದೇಶದಲ್ಲೇ ಮಾದರಿಯಾದ ಒಂದು ಟ್ಯಾಗ್ ವ್ಯವಸ್ಥೆ ಮಾಡುತ್ತಿದ್ದೇವೆ. ಕೊರೊನಾ ರೋಗಿಗಳು ಮತ್ತು ಕ್ವಾರಂಟೈನ್ ನಲ್ಲಿರುವವರ ಕೈಗೆ ಟ್ಯಾಗ್ ಕಟ್ಟುತ್ತೇವೆ. 14 ದಿನ ಟ್ಯಾಗ್ ಆಕ್ಟಿವ್ ಇರುತ್ತದೆ. ಇದರಿಂದ ಅವರ ಚಲನವಲನ ತಿಳಿಯಲು ಸಹಾಯವಾಗಲಿದೆ. ಒಂದು ವೇಳೆ ಟ್ಯಾಗ್ ಕಟ್ ಮಾಡಿದರೆ, ಯಾರಾದರೂ ಕ್ವಾರಂಟೈನ್ ಸೆಂಟರ್ ನಿಂದ ಹೊರ ಹೋದರೆ ಬೀಪ್ ಸೌಂಡ್ ಅಥವಾ ಅಲಾರಂ ಸೈರನ್ ಬರುತ್ತೆ. ಅಧಿಕಾರಿಗಳಿಗೆ ಟ್ಯಾಗ್‍ನಿಂದ ಮೆಸೇಜ್ ಬರುವ ವ್ಯವಸ್ಥೆ ಮಾಡುತ್ತಿದ್ದೇವೆ. ಯಾವ ಕೊರೊನಾ ರೋಗಿ ಕೂಡ ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ. ಇನ್ನೂ ಕೆಲವೇ ದಿನಗಳಲ್ಲಿ ಅಂತಹ ಟ್ಯಾಗ್ ವ್ಯವಸ್ಥೆ ಸಿದ್ಧವಾಗಲಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button