Karnataka NewsLatestPolitics

*ಕಲ್ಲು ಕ್ವಾರಿ ದುರಂತ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಡಿಸಿಎಂ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಬಿದ್ದು 7 ಕಾರ್ಮಿಕರು ಮೃತಪಟ್ತಿರುವ ಘಟನೆ ಬಗ್ಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪವಿರುವ ಕಾವೇರಿ ಕ್ರಷರ್‌ನಲ್ಲಿ ಈ ದುರಂತ ಸಂಭವಿಸಿದೆ. ಭೀಕರ ದುರಂತದಲ್ಲಿ ಯಾದಗಿರಿ ಮೂಲದ ಓರ್ವ ಹಾಗೂ ಮಧ್ಯಪ್ರದೇಶ ಮೂಲದ ಆರು ಕಾರ್ಮಿಕರು ಸೇರಿ ಒಟ್ಟು ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದುರ್ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್, ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ. ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ಅಂಶವಿದ್ದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಘಟನೆ ಅಕ್ರಮವಾಗಿ ನಡೆಯುತ್ತಿದೆಯೇ ಎಂಬುದರ ಬಗ್ಗೆಯೂ ಪರಿಶೀಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button