ಭಾನುವಾರ ರಾಜ್ಯಾದ್ಯಂತ ನಡೆಯಬೇಕಿದ್ದ ಪರೀಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯಾದ್ಯಂತ ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಹಠಾತ್ ಮಂದೂಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ನಡೆಸಬೇಕಿತ್ತು. ರಾಜ್ಯದಲ್ಲಿ 1100 ಪೋಸ್ಟ್ ಗಳಿಗಾಗಿ ಸುಮಾರು 3.74 ಲಕ್ಷ ಜನರು ಪರೀಕ್ಷೆ ಬರೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಹಠಾತ್ ಮುಂದೂಡಲಾಗಿದೆ.
ಬೆಂಗಳೂರು ಪೊಲೀಸರು 6 ಜನರನ್ನು ಬಂಧಿಸಿದ್ದು, ಸುಮಾರು 6 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.
ಲೋಕಸೇವಾ ಆಯೋಗ ಪ್ರಕಟಣೆ ನೀಡಿದ್ದು ಅನಿವಾರ್ಯ ಕಾರಣದಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ತಿಳಿಸಿದೆ.
ಮುಂದಿನ ದಿನಾಂಕ ಇನ್ನಷ್ಟೆ ಪ್ರಕಟಿಸಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ