*ಕರ್ಲೆ ಕೊಲೆ ಪ್ರಕರಣದ ಆರೋಪಿಗಳ ಶೀಘ್ರ ಬಂಧನ: ಪೊಲೀಸ್ ಆಯುಕ್ತ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದಲ್ಲಿ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆ ಮಾಡಿದ ಆರೋಪಿಗಳ ಸುಳಿವು ಸಿಕ್ಕಿದ್ದು, ಆದಷ್ಟು ಬೇಗ ಬಂಧಿಸಲಾಗುವುದು. ಹತ್ಯೆ ಯಾವ ಕಾರಣಕ್ಕೆ ಮಾಡಿದ್ದಾರೆ ಎಂದು ತಿಳಿದು ಬಂದಿಲ್ಲ. ಆರೋಪಿಗಳನ್ನು ಬಂಧಿಸಿದ ಬಳಿಕ ತಿಳಿದು ಬರಲಿದೆ ಎಂದರು.
ಬೆಳಗಾವಿಯಲ್ಲಿ ಪಾರ್ಕಿಂಗ್ ಸಮಸ್ಯೆ ಇರುವ ಕಡೆಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಮಹಾನಗರ ಪಾಲಿಕೆಯ ಆಯುಕ್ತರೊಂದಿಗೆ ಸಭೆ ನಡೆಸಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ನಗರದಲ್ಲಿ ಸರಗಳ್ಳತನ, ಮನೆಗಳ್ಳತ ಹಾಗೂ ಅಂಗಡಿ ಕಳ್ಳತನದ ಪ್ರಕರಣಗಳು ನಡೆಯುತ್ತಿವೆ. ಇದಕ್ಕೊಂದು ವಿಶೇಷ ತಂಡ ರಚಿಸಿ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಸರಗಳ್ಳತನವಾದಾಗ ನೇರವಾಗಿ 112ಗೆ ಕರೆ ಮಾಡಿ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ