Latest

ಇಂದಿನಿಂದಲೇ ಜಾರಿಗೆ ಬರಲಿದೆ ಕಠಿಣ ನಿಯಮ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ವತ: ರಾಜ್ಯಪಾಲರೇ ಸರ್ವಪಕ್ಷ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ವಪಕ್ಷ ಸಭೆ ಬಳಿಕ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ಬರಲಿದೆ. ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ನಿಯಮ ಜಾರಿಯಾಗಲಿದೆ ಎಂದರು.

ಇನ್ನು ರಾಜ್ಯಪಾಲರು ಕರೆದಿರುವ ಸಭೆಗೆ ವಿಪಕ್ಷಗಳು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಎಲ್ಲಾ ರಾಜ್ಯಗಳ ರಾಜ್ಯಪಾಲರೂ ಕೂಡ ಸರ್ವ ಪಕ್ಷ ಸಭೆ ನಡೆಸುತ್ತಿದ್ದಾರೆ. ಕೋವಿಡ್ ನಿಯಂತ್ರಣದಲ್ಲಿ ರಾಜ್ಯಪಾಲರು ಭಾಗಿಯಾಗಿ ಕ್ರಮಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಸಭೆ ನಡೆಸುತ್ತಿದ್ದು, ಇಂದಿನಿಂದಲೇ ಕಠಿಣ ನಿಯಮ ಜಾರಿಗೆ ಬರಲಿದೆ ಎಂದು ಹೇಳಿದರು.

Home add -Advt

Related Articles

Back to top button