Karnataka NewsLatestPolitics

*ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರೇ ಕಳ್ಳರು: ಬೇಲಿಯೇ ಎದ್ದು ಹೊಲ ಮೇಯುತ್ತಿರುವ ಸ್ಥಿತಿ: ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರೇ ಕಳ್ಳರಾಗಿದ್ದಾರೆ. ಈ ಹಿಂದೆಯೇ ಡ್ರಗ್ಸ್ ಮಾರಾಟ, ದರೋಡೆ ಮೊದಲಾದ ಪ್ರಕರಣಗಳಲ್ಲಿ ಶಾಮೀಲಾದ ರಾಜ್ಯದ 124 ಪೊಲೀಸರು ಅಮಾನತುಗೊಂಡಿರುವುದು ಇಡೀ ಗೃಹ ಇಲಾಖೆಗೆ ನಾಚಿಕೆಗೇಡಿನ ಸಂಗತಿ. ಅಂತಹ ಇಲಾಖೆಯ ಹೊಣೆಯನ್ನು ‌ಸಚಿವ ಪ್ರಿಯಾಂಕ್ ಖರ್ಗೆ ವಹಿಸಿಕೊಂಡ ನಂತರ ಇಲಾಖೆಯ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ಹರಾಜಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗೆ ರಾಜಸ್ತಾನಕ್ಕೆ ತೆರಳಿದ್ದ ಎಚ್ಎಎಲ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಲಂಚ ಪಡೆಯುವಾಗ ಅಲ್ಲಿನ ಎಸಿಬಿ‌ ಬಳಿ ಸಿಕ್ಕಿಬಿದ್ದಿದ್ದಾರೆ ಎಂದು ಕಿಡಿಕಾರಿದರು.

ಆರ್ ಎಸ್ಎಸ್ ಗೆ ನಿಯಂತ್ರಣ ಹೇರಲು, ಧರ್ಮಸ್ಥಳದ ಬುರುಡೆ ಪ್ರಕರಣದ ಬಗ್ಗೆ ಚರ್ಚೆ ನಡೆಸುವ ಬದಲು, ಪೊಲೀಸ್ ಇಲಾಖೆಯಲ್ಲಿ ಶಿಸ್ತು ತರಲು ಸಭೆ ನಡೆಸಿದ್ದರೆ ರಾಜ್ಯದ ಕಾನೂನು ವ್ಯವಸ್ಥೆ ಈ ರೀತಿ ನಗೆಪಾಟಲಿಗೀಡಾಗುತ್ತಿರಲಿಲ್ಲ. 10 ರೂಪಾಯಿ ಲಂಚ‌ ಕೇಳಿದರೂ ಕರೆ ಮಾಡಿ ಎನ್ನುವ ಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಸರ್ಕಾರದಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿರುವಾಗ ಜನರು ದೂರುಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು? ಎಂದು ಪ್ರಶ್ನಿಸಿದ್ದಾರೆ.

Home add -Advt

Related Articles

Back to top button