
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನ ಸಭೆಯ ವಿರೋಧ ಪಕ್ಷದ ನಾಯಕನನ್ನಾಗಿ ಆರ್.ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆೆದ 45 ವರ್ಷಗಳಿಂದ ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿರುವ ಅಶೋಕ 7ನೇ ಬಾರಿಗೆ ಶಾಸಕರಾಗಿದ್ದಾರೆ. ಹಲವು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ.