ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಕಿತ್ತಾಟ ಆರಂಭವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.
ತನ್ಮೂಲಕ ಮತ್ತೆ ಅವರಿಬ್ಬರ ಮಧ್ಯೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ಹಿಜಾಬ್ ಪರ ಮಾತನಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಡುತ್ತಿಲ್ಲ, ಹಿಂದೂಗಳ ಪರ ಮಾತನಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಡುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ V/S ಡಿ.ಕೆ.ಶಿವಕುಮಾರ್ ಫೈಟ್ ಆರಂಭವಾಗಿದೆ. ಕಾಂಗ್ರೆಸ್ ಪರಿಸ್ಥಿತಿ ಹೇಗಿದೆ ಎಂದರೆ ಊರಿಗೆ ಮನುಷ್ಯನೂ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ ಎಂಬಂತಾಗಿದೆ ಎಂದರು.
ಸದನದಲ್ಲಿ ಕಾಂಗ್ರೆಸ್ ಹಿಜಾಬ್, ಕೇಸರಿ ಶಾಲಿನ ಬಗ್ಗೆ ಪ್ರಸ್ತಾಪವನ್ನೇ ಮಾಡುತ್ತಿಲ್ಲ. ಕಾಂಗ್ರೆಸ್ ನಾಯಕರಿಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದಿದ್ದರೆ ಹಿಜಾಬ್ ವಿಚಾರವನ್ನು ಪ್ರಸ್ತಾಪಿಸಿ ಶಿಕ್ಷಣದ ಬಗ್ಗೆ ಮಾತನಾಡುತ್ತಿದ್ದರು ಅಲ್ಲವೇ? ಆದರೆ ಅವರು ಯಾರೂ ಕೂಡ ಹಿಜಾಬ್, ಕೇಸರಿ ಶಾಲು ವಿಚಾರವಾಗಿ ಸದನದಲ್ಲಿ ಮಾತನಾಡುತ್ತಿಲ್ಲ. ವೋಟ್ ಬ್ಯಾಂಕ್ ಕೈತಪ್ಪುವ ಭೀತಿಯಿಂದ ಮಾತನಾಡುತ್ತಿಲ್ಲ. ಈಶ್ವರಪ್ಪನವರ ವಿಚಾರ ಹಿಡಿದುಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿ ಸೇರ್ಪಡೆ ವಿಚಾರ; ಸಭಾಪತಿ ಹೊರಟ್ಟಿ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ