
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿರುವುದು ಸಂತಸದ ವಿಚಾರ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಬಿಜೆಪಿ ಗೆಲುವು ಖಚಿತ. ಬೊಮ್ಮಾಯಿ ಸರ್ಕಾರಕ್ಕೆ ಮತದಾರರು ಸಮ್ಮತಿ ನೀಡಿದ್ದಾರೆ ಎಂಬುದು ಸಾಬೀತಾಗಿದೆ ಎಂದರು.
ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಬಿಎಸ್ ವೈ ಅವರ ಮಾರ್ಗದರ್ಶನದ ಫಲ. ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಮತದಾರರು ಓಕೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಮನೆಗೆ ಹೋಗುವಂತೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ಇನ್ನಷ್ಟು ಹೀನಾಯ ಸೋಲಾಗಲಿದೆ ಎಂದು ಹೇಳಿದರು.
ಬೆಳಗಾವಿಯನ್ನು ಸರ್ವಾಂಗ ಸುಂದರವಾಗಿ ರೂಪಿಸಲು ಜನರು ಆಶಿರ್ವದಿಸಿದ್ದಾರೆ – ಕಾರಜೋಳ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ