ಸೋತವರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಎಂದ ಆರ್.ಅಶೋಕ್

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್ ಅಶೋಕ್, ಸದ್ಯಕ್ಕೆ ಗೆದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಸೋತವರ ಬಗ್ಗೆ ಸಿಎಂ ಯಡಿಯೂರಪ್ಪ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಗೆದ್ದ ಶಾಸಕರಿಗೆ ನಾವು ಮೊದಲು ಆದ್ಯತೆ ನೀಡುತ್ತೇವೆ. ಸದ್ಯಕ್ಕೆ ಸೋತವರಿಗೆ ಸ್ಥಾನಮಾನವಿಲ್ಲ. ಸೋತವರ ಬಗ್ಗೆ ಮುಂದೆ ನೋಡೋಣ ಎಂದು ಹೇಳಿದರು.

Home add -Advt

ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಯಡಿಯೂರಪ್ಪನವರಿಗೆ ಗೊತ್ತಿದೆ. ಯಾರನ್ನು ಮಂತ್ರಿ ಮಾಡಬೇಕು, ಯಾವ ರೀತಿ ನಿಭಾಯಿಸಬೇಕೆಂದು ಅವರಿಗೆ ತಿಳಿದಿದೆ ಎಂದರು. ಇನ್ನು ಸಚಿವ ಶ್ರೀರಾಮುಲು ಆವರಿಗೆ ಡಿಸಿಎಂ ಸ್ಥಾನ ವಿಚಾರವಾಗಿ ಮಾತನಾಡಿದ ಅಶೋಕ್, ರಾಜ್ಯದಲ್ಲಿ ಬಹಳಷ್ಟು ಮಂದಿಗೆ ಡಿಸಿಎಂ ಆಗಬೇಕೆಂಬ ಆಸೆ ಇದೆ. ಆದರೆ ಆಸೆ ಇರುವುದನ್ನು ಸಾಧನೆ ಮಾಡಲು ಆಗುದು ಎಂದು ಹೇಳಿದರು.

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಬೆದರಿಕೆ ಪತ್ರದ ಬಗ್ಗೆ ಪ್ರತಿಕ್ರಿಯಿಸಿ ಯಾರಾದರೂ ಹೆಚ್ ಡಿ ಕುಮಾರಸ್ವಾಮಿಗೆ ಬೆದರಿಕೆ ಹಾಕಲು ಸಾಧ್ಯವೇ? ಕುಮಾರಸ್ವಾಮಿಗೆ ಬೆದರಿಕೆ ಹಾಕೋ ಧೈರ್ಯ ಯಾರಿಗಿದೆ? ಅವರೇ ಊರಿಗೆಲ್ಲಾ ಬೆದರಿಕೆ ಹಾಕುತ್ತಾರೆ. ಇದೊಂದು ಸುಳ್ಳು ಸುದ್ದಿ ಅಷ್ಟೇ ಎಂದು ತಿಳಿಸಿದರು.

Related Articles

Back to top button