Latest

ನಾಯಕತ್ವ ಚರ್ಚೆ ಬಗ್ಗೆ ಅಂತ್ಯ ಹಾಡಬೇಕಿದೆ ಎಂದ ಆರ್.ಅಶೋಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ಎಂಬ ಸಿಎಂ ಯಡಿಯೂರಪ್ಪನವರ ಹೇಳಿಕೆ ಬೆನ್ನಲ್ಲೇ ಬಿಜೆಪಿ ರಾಜ್ಯ ನಾಯಕರು ಸಿಎಂ ಬಿಎಸ್ ವೈ ಜೊತೆ ಚರ್ಚೆ ನಡೆಸಿದ್ದು, ಅವರನ್ನು ಸಮಾಧಾನ ಪಡಿಸುವ ಯತ್ನ ನಡೆಸಿದ್ದಾರೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಪದೇ ಪದೇ ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪವಾಗುತ್ತಿರುವುದು ಸಿಎಂ ಮನಸ್ಸಿಗೆ ನೋವಾಗಿದೆ. ಹಾಗಾಗಿ ವರಿಷ್ಠರು ಸೂಚಿಸಿದರೆ ರಾಜೀನಾಮೆಗೆ ಸಿದ್ಧ ಎಂದು ಹೇಳಿರಬೇಕು. ನಾಯಕತ್ವದ ಬದಲಾವಣೆ ಚರ್ಚೆಗೆ ಅಂತ್ಯಹಾಡಬೇಕು ಎಂಬ ನಿಟ್ಟಿನಲ್ಲಿ ಎಲ್ಲರೂ ಸೇರಿ ಚರ್ಚಿಸಿ ನಿರ್ಧಾರಕ್ಕೆ ಬಂದಿದ್ದೇವೆ. ಯಡಿಯೂರಪ್ಪನವರೇ ನಮ್ಮ ಸರ್ವಸಮ್ಮತ ನಾಯಕರು ಈ ಬಗ್ಗೆ ಯಾವುದೇ ಗೊಂದಲ ಬೇಡ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರು.

ಕೋವಿಡ್ ನಂತಹ ಸಂಕಷ್ಟದಿಂದ ಇಡೀ ದೇಶದಲ್ಲಿ ಜನರು ಪರದಾಡುತ್ತಿದ್ದರೂ ಕೆಲ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳು ಮನೆಯಿಂದಲೇ ಹೊರಬರುತ್ತಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಆದರೆ ನಮ್ಮ ಸಿಎಂ ಸ್ವತ: ತಾವೇ ಆಸ್ಪತ್ರೆಗಳಿಗೂ ತೆರಳಿ ಕೋವಿಡ್ ರೋಗಿಗಳ ಆರೋಗ್ಯ ವಿಚಾರಿಸುತ್ತಿದ್ದಾರೆ. ಆಸ್ಪತ್ರೆಗಳಲ್ಲಿನ ವ್ಯವಸ್ಥೆ ಪರಿಶೀಲಿಸುತ್ತಿದ್ದಾರೆ. ಜನರಿಗಾಗಿ ಎರಡು ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಹಗಲು ರಾತ್ರಿ ಎನ್ನದೇ ದುಡಿಯುತ್ತಿದ್ದಾರೆ ಇಷ್ಟಾದರೂ ಕೆಲವವರು ದೆಹಲಿಗೆ ಹೋಗುತ್ತಾ, ತಾವೇ ಮುಂದಿನ ಮುಖ್ಯಮಂತ್ರಿ ಎಂಬ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಸಹಜವಾಗಿ ಯಡಿಯೂರಪ್ಪನವರಿಗೆ ನೋವು ತಂದಿದೆ. ಎಲ್ಲಾ ನಾಯಕರು ಸೇರಿ ಚರ್ಚೆ ನಡೆಸಿದ್ದೇವೆ. ವರಿಷ್ಠರು ಕೂಡ ಬಿಎಸ್ ವೈಯವರೇ ನಾಯಕರು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಯೋಗೇಶ್ವರ್ ಕೂಡ ಒಪ್ಪಿಕೊಂಡಿದ್ದಾರೆ. ನಾಕತ್ವ ಬದಲಾವಣೆ ವಿಚಾರದ ಬಗ್ಗೆ ಇನ್ಮುಂದೆ ಯಾವುದೇ ಚರ್ಚೆಯಿಲ್ಲ ಎಲ್ಲಾ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಎಂದು ಹೇಳಿದರು.
ಸಿಎಂ ಹೇಳಿಕೆ ಬೆನ್ನಲ್ಲೇ ನಿರಾಣಿ, ಯತ್ನಾಳ್ ಹೆಸರು ಚರ್ಚೆಗೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button