ಡಿ.ಕೆ.ಶಿವಕುಮಾರ್ ಅವರೇ ನಿಮ್ಮದು ಬ್ರ್ಯಾಂಡ್ ಬೆಂಗಳೂರೋ? ಬ್ಲ್ಯಾಕ್ ಬೆಂಗಳೂರೋ? ಎಂದು ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದರಲ್ಲ, ಕಾಂಗ್ರೆಸ್ ವಿರುದ್ಧ 15% ಕಮಿಷನ್ ಆರೋಪ ಕೇಳಿಬರುತ್ತಿದೆ. ಇದಕ್ಕೆ ನಿಮ್ಮ ಉತ್ತರವೇನು? ಎಂದು ಕಾಂಗ್ರೆಸ್ ನಾಯಕರನ್ನು ಮಾಜಿ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರಕ್ಕೆಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ನೀವು ಕಮಿಷನ್ ಕೇಳಿಲ್ಲ ಅಂದ್ರೆ ಗುತ್ತಿಗೆದಾರರು ಅಜ್ಜಯ್ಯನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಿ ಎಂದು ಸವಾಲು ಹಾಕಿದ್ದಾರೆ. ಈ ಸವಾಲು ಒಪ್ಪಿಲ್ಲ ಯಾಕೆ?
ಕಮಿಷನ್ ದಂಧೆ ಶುರುಮಾಡಿದ್ದು ಲೋಕಸಭಾ ಚುನಾವಣೆ ಫಂಡ್ ಸಂಗ್ರಹಕ್ಕಾ?
ಗುತ್ತಿಗೆದಾರರ ಹಿತಾಸಕ್ತಿ ಕಾಪಾಡುವುದಾಗಿ ವಾಗ್ದಾನ ಕೊಟ್ಟು ಅಧಿಕಾರ ಹಿಡಿದ ನೀವು ಈಗ ಅವರ ಕಡೆಗಣನೆ ಮಾಡುತ್ತಿರುವುದು ಯಾಕೆ?
ಬಿಬಿಎಂಪಿ 2019-23ರವರೆಗಿನ ಕಾಮಗಾರಿಗಳನ್ನು ಮಾತ್ರ ತನಿಖೆ ನಡೆಸುತ್ತಿದ್ದೀರಿ. ನೀವು ಪ್ರಾಮಾಣಿಕವಾಗಿದ್ದರೆ 2013ರಿಂದಲೂ ತನಿಖೆ ಮಾಡಬಹುದಲ್ಲಾ?
ಗುತ್ತಿಗೆದಾರರೆಲ್ಲರೂ ಕಳ್ಳರಾದರೆ 50 ವರ್ಷ ರಾಜ್ಯವಾಳಿದ ಕಾಂಗ್ರೆಸ್ ನವರ ಬಳುವಳಿ ಇದು.
ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿದರೆ ನಿಮ್ಮ ಬ್ರ್ಯಾಂಡ್ ಬೆಂಗಳೂರು ಕಾಮಗಾರಿ ಕಥೆ ಏನು?
300 ಜನ ಗುತ್ತಿಗೆದರರು ದಯಾಮರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಉತ್ತರವೇನು?
ದೆಹಲಿಯಲ್ಲಿ ಮಂತ್ರಿಗಳನ್ನು ಕರೆಸಿ ಸಭೆ ಮಾಡಿದ್ದು ಲೋಕಸಭಾ ಸೀಟ್ ಗೆಲ್ಲುವುದಕ್ಕೋ ಅಥವಾ ಸೂಟ್ ಕೇಸ್ ತುಂಬಿಕೊಳ್ಳಲೋ?
ಡಿ.ಕೆ.ಶಿವಕುಮಾರ್ ಅವರೇ ನಿಮ್ಮದು ಬ್ರ್ಯಾಂಡ್ ಬೆಂಗಳೂರೋ? ಬ್ಲ್ಯಾಕ್ ಬೆಂಗಳೂರೋ?
ಸಿಎಂ ಹಣ ಬಿಡುಗಡೆ ಮಾಡಿದರೆ ಡಿಸಿಎಂ ತಡೆ ಹಿಡಿದಿದ್ದಾರೆ. ಹಾಗಾದರೆ ಹಣ ಬಿಡುಗಡೆ ಮಾಡಲು ಸಿಎಂ ಗೆ ವೇಣುಗೋಪಾಲ್ ಸೂಚನೆ ನೀಡಿದರೆ ಸುರ್ಜೇವಾಲಾ ತಡೆ ನೀಡಲು ಸೂಚನೆ ನೀಡಿದ್ರಾ? ಎಂದು ಪ್ರಶ್ನಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ