ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಫೋನ್ ಟ್ಯಾಪಿಂಗ್ ಹಗರಣದಲ್ಲಿ ಸಿಲುಕಿದವರೇ ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಯ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಕ್ಕೆ ಕಂದಾಯ ಸಚಿವ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.
ಡಿ.ಕೆ ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರ ಫೋನ್ ಟ್ಯಾಪ್ ಮಾಡಿಸಿದ್ದು, ಈಗ ಅದರ ತನಿಖೆ ನಡೆಯುತ್ತಿರೋದು ಎಲ್ಲರಿಗೂ ಗೊತ್ತಿದೆ. ಆ ಪ್ರಕರಣದ ತನಿಖೆ ಒಂದು ಹಂತಕ್ಕೆ ಬರುತ್ತಿದೆ. ಆದರೆ, ಈಗ ಫೋನ್ ಟ್ಯಾಪಿಂಗ್ ಹಗರಣದಲ್ಲಿ ಸಿಕ್ಕಿಹಾಕಿಕೊಂಡವರು, ಫೋನ್ ಟ್ಯಾಪ್ ಅನುಭವ ಯಾರಿಗಿದೆಯೋ ಅವರೇ ಆರೋಪ ಮಾಡುತ್ತಿರುವುದು ಅಚ್ಚರಿ ತಂದಿದೆ ಎಂದರು.
ಗೃಹ ಸಚಿವ ಬೊಮ್ಮಾಯಿ ಫೋನ್ ಟ್ಯಾಪಿಂಗ್ ಮಾಡಿಸುವಂತಹ ವ್ಯಕ್ತಿಯಲ್ಲ. ಫೋನ್ ಟ್ಯಾಪಿಂಗ್ ಸಂಸ್ಕೃತಿ ಕಾಂಗ್ರೆಸ್ನವರಿಗೇ ಇದೆ ಹೊರತು ಅದು ಬಿಜೆಪಿ ಸಂಸ್ಕೃತಿಯಲ್ಲ. ನಮ್ಮ ಸರ್ಕಾರಕ್ಕೆ ಫೋನ್ ಟ್ಯಾಪಿಂಗ್ ಮಾಡೋ ಅಗತ್ಯ ಇಲ್ಲ ಎಂದು ಕಿಡಿಕಾರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ