Kannada NewsKarnataka NewsLatestPolitics

*ವಿಪಕ್ಷ ನಾಯಕ ಆರ್.ಅಶೋಕ್ ಗೆ ಅನಾರೋಗ್ಯ: ಎಲ್ಲಾ ಕಾರ್ಯಕ್ರಮಗಳು ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಅನಾರೋಗ್ಯಕ್ಕಿಡಾಗಿದ್ದು, ಇಂದಿನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ವಿಪಕ್ಷ ನಾಯಕ ಅಶೋಕ್ ಜ್ವರದಿಂದ ಬಳಲುತ್ತಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಕಚೇರಿಯಲ್ಲಾಗಲಿ ಅಥವಾ ವಿಪಕ್ಷ ನಾಯಕರ ಕಚೇರಿಯಲ್ಲಾಗಲಿ ಭೇಟಿಗೆ ಲಭ್ಯವಿರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಅವರು ಗುಣಮುಖರಾಗುವವರೆಗೂ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button