
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸಚಿವರ ಹನಿಟ್ರ್ಯಾಪ್ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಇದೀಗ ಫೋನ್ ಟ್ಯಾಪಿಂಗ್ ಆರೋಪಗಳು ಕೇಳಿಬರುತ್ತಿವೆ
ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ನನ್ನ ಫೋನ್ ಟ್ಯಾಪ್ ಆಗಿದೆ. ನನ್ನ ಫೋನ್ ಟ್ಯಾಪಿಂಗ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇವಲ ನನ್ನ ಫೋನ್ ಮಾತ್ರವಲ್ಲ ವಿಪಕ್ಷದವರ ಎಲ್ಲರ ಫೋನ್ ಟ್ಯಾಪಿಂಗ್ ಆಗಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೇ ಫೋನ್ ಟ್ಯಾಪಿಂಗ್ ನಡೆಯುತ್ತಿದೆ. ಸಿದ್ದರಮಯ್ಯ ಕುಮ್ಮಕ್ಕಿನಿಂದಲೇ ಹನಿಟ್ರ್ಯಾಪ್ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.