Latest

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 1 ಲಕ್ಷ ಪರಿಹಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಬಡತನರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 1 ಲಕ್ಷ ಪರಿಹಾರ ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಬಿಪಿಎಲ್ ಕಾರ್ಡ್ ದಾರರ ಕುಟುಂಬದ ದುಡಿಯುವ ವ್ಯಕ್ತಿ ಕೊರೊನಾದಿಂದ ಮೃತರಾಗಿದ್ದರೆ ಅಂತಹ ಕುಟುಂಬಕ್ಕೆ ರಾಜ್ಯ ಸರ್ಕಾರ 1 ಲಕ್ಷ ಪರಿಹಾರ ನೀಡಲಿದೆ. ಕೇಂದ್ರ ಸರ್ಕಾರ ಕೂಡ 50 ಸಾವಿರ ಪರಿಹಾರ ಮೊತ್ತ ಘೋಷಿಸಿದೆ ಎಂದರು.

ಇಂದಿನಿಂದಲೇ ಪರಿಹಾರ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಇದುವರೆಗೂ 7,729 ಅರ್ಜಿಗಳು ಬಂದಿವೆ. ರಾಜ್ಯ ಸರ್ಕಾರದಿಂದ 1 ಲಕ್ಷ ಪರಿಹಾರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಘೋಷಿಸಿರುವ 50 ಸಾವಿರ ಪರಿಹಾರ ಹಣ ಇನ್ನೂ ನಮಗೆ ಬಂದಿಲ್ಲ. ಆ ಹಣ ಬಂದ ಬಳಿಕ ಅದನ್ನೂ ನೀಡಲಾಗುವುದು ಎಂದರು.

ಪರಿಹಾರ ಕಾರ್ಯಕ್ಕಾಗಿ 300 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕೋವಿಡ್ ನಿಂದಾಗಿ ಹಲವು ಕುಟುಂಬಗಳು ಸಂಕಷ್ಟಕ್ಕೀಡಾಗಿದ್ದು, ಕುಟುಂಬವನ್ನು ನಿರ್ವಹಣೆ ಮಾಡುತ್ತಿದ್ದ ಅನೇಕ ಬಡ ವರ್ಗದವರು ಸಾವನ್ನಪ್ಪಿದ್ದಾರೆ. ಈ ನಿಟ್ಟಿನಲ್ಲಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲಾಗಿದೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಸಿಎಂ ಸರಣಿ ಕಾರ್ಯಕ್ರಮ -ಇಲ್ಲಿದೆ ಸಂಪೂರ್ಣ ವಿವರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button