Kannada NewsKarnataka NewsLatestPolitics

*ಸದ್ದಿಲ್ಲದೇ ವಿದ್ಯುತ್ ದರ ಏರಿಸಿ ಕುತಂತ್ರಿಯಾದ ಸಿಎಂ ಸಿದ್ದರಾಮಯ್ಯ: ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಜನರಿಗೆ ಕರೆಂಟ್ ಶಾಕ್ ನೀಡಿದೆ. ಏಕಾಏಕಿ ವಿದ್ಯುತ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ವಿಪಕ್ಷ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈಗ ವಿದ್ಯುತ್ ದರ ಏರಿಕೆಯಾಗಿದೆ. ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮುಂದೆ ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button