Politics

*ಶಾಸಕ ಹೆಬ್ಬಾರ್ ಗೂ ಬಿಜೆಪಿಗೂ ಸಂಬಂಧವಿಲ್ಲ ಎಂದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಲವು ದಿನಗಳಿಂದ ಪಕ್ಷದ ಯಾವುದೇ ಕಾರ್ಯಕ್ರಮ, ಹೋರಾತ, ಚಟುವಟಿಕೆಯಲ್ಲಿ ಭಾಗಿಯಗದೇ ದೂರ ಉಳಿದಿದ್ದು, ಆಗಾಗ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಅಲ್ಲದೇ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಹೆಬ್ಬಾರ್ ವಿರುದ್ಧ ಗುಡುಗಿದ್ದಾರೆ.

Home add -Advt

ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧದ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿಯೂ ಗೈರಾಗುವ ಮೂಲಕ ಸ್ವಕ್ಷೇತ್ರದ ಬಿಜೆಪಿ ಹೋರಾಟದಿಂದಲೂ ದೂರ ಉಳಿದಿದ್ದಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ ಕೆಂಗಣ್ಣಿಗೆ ಗುರಿಯಾಗಿದ್ದರು. ಸಮಾವೇಶದಲ್ಲಿ ಮಾತನಾಡಿದ್ದ ವಿಜಯೇಂದ್ರ ಮುಂದಿನ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಪಕ್ಷದ ಟಿಕೆಟ್ ಎನ್ನುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದ್ದರು. ಇದೀಗ ಈ ಬೆಳವಣಿಗೆ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಶಿವರಾಮ್ ಹೆಬ್ಬಾರ್ ಗೂ ನಮಗೂ ಮುಗಿದ ಅಧ್ಯಾಯ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ಶಾಸಕ ಶಿವರಾಮ್ ಹೆಬ್ಬಾರ್ ಈಗ ನಮ್ಮ ಪಕ್ಷದವರಲ್ಲ. ಅವರಿಗೂ ಬಿಜೆಪಿಗೂ ಸಂಬಂಧವಿಲ್ಲ. ನಾವು ಹೋರಾಟ, ಪ್ರತಿಭಟನೆ ಮಾಡುತ್ತಿದ್ದರೆ ಅವರು ಸುಮ್ಮನೆ ಕುಳಿತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಹಿಂದುತ್ವದ ಬಗ್ಗೆ ಮಾತನಾಡುವವರಿಗೆ, ಹೋರಾಡುವವರಿಗೆ ನಮ್ಮ ಬೆಂಬಲ. ಶಾಸಕ ಯತ್ನಾಳ್ ಅವರಿಗೆ ಕೊಲೆ ಬೆದರಿಕೆಯನ್ನು ಖಂಡಿಸುತ್ತೇವೆ ಎಂದು ಹೇಳುವ ಮೂಲಕ ಉಚ್ಛಾಟಿತ ಶಾಸಕ ಯತ್ನಾಳ್ ಪರ ಅಶೋಕ್ ಬ್ಯಾಟ್ ಬೀಸಿದಾರೆ.

Related Articles

Back to top button