Kannada NewsKarnataka NewsLatestPolitics
*ಸರ್ಕಾರ ಶ್ವೇತ ಪತ್ರ ಹೊರಡಿಸಲಿ; ಆರ್. ಅಶೋಕ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಒಂದು ಸುಳ್ಳನ್ನ ನೂರು ಬಾರಿ ಹೇಳಿದರೆ ಅದು ಸತ್ಯವಾಗುವುದಿಲ್ಲ ಸಿಎಂ ಸಿದ್ದರಾಮಯ್ಯ ಅವರೇ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ರಾಜ್ಯಕ್ಕೆ ಅನುದಾನದ ಹಣ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಯುಪಿಎ ಅವಧಿಗೆ ಹೋಲಿಸಿದರೆ ಎನ್ ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ 3 ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ ನಿಮಗೂ ಗೊತ್ತು ಎಂದಿದ್ದಾರೆ.
14 ಬಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುವುದು ಬಿಟ್ಟು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ಕಳೆದ 20 ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಒಟ್ಟು ಅನುದಾನ, ತೆರಿಗೆ ಹಂಚಿಕೆ ಬಗ್ಗೆ ಶ್ವೇತ ಪತ್ರ ಹೊರಡಿಸಲಿ.




