Kannada NewsKarnataka NewsLatestPolitics

*ಕೋರ್ಟ್ ನಿಂದ ಮತ್ತೆ ಛೀಮಾರಿ ಹಾಕಿಸಿಕೊಂಡ ಸಿಎಂ; ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಡಲಿ; ಆರ್.ಅಶೋಕ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ ಎಂದು ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ.

ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಈಗ ಮತ್ತೊಮ್ಮೆ ರಂಗೋಲಿ ಕೆಳಗೆ ತೂರಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.

Home add -Advt

ಸಿದ್ದರಾಮಯ್ಯನವರೇ, ತಮಗೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಿ ರಾಜ್ಯದ ಜನತೆಯ ಕ್ಷಮೆ ಕೇಳಿ. ಸ್ವತಃ ರಾಜ್ಯದ ಉಚ್ಛ ನ್ಯಾಯಾಲಯವೇ ತಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವಾಗ ಸಿಎಂ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯಲು ತಮಗೆ ಅರ್ಹತೆ ಇಲ್ಲ ಎಂದು ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button