ರಾಮನಗರ: ಕಾಂಗ್ರೆಸ್ ಹಾಗೂ ಜೆಡಿಎಸ್ ನವರು ಅಣ್ಣ-ತಮ್ಮಂದಿರು. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಇದ್ದರೆ ಎಲ್ಲವನ್ನೂ ಮುಚ್ಚಿ ಹಾಕುತ್ತಿದ್ದರು ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಭ್ರಷ್ಟಾಚಾರದ 70 ಪ್ರಕರಣ ಮುಚ್ಚಿ ಹಾಕಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನವರು ಅಣ್ಣ-ತಮ್ಮಂದಿರು. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಇದ್ದರೆ ಎಲ್ಲವನ್ನೂ ಮುಚ್ಚಿ ಹಾಕುತ್ತಿದ್ದರು. ನಮಗೆ ಕಿಚಡಿ ಸರ್ಕಾರ ಬೇಡ. ಸ್ಥಿರ ಸರ್ಕಾರ ಬೇಕಿದೆ ಎಂದರು.
ನಮ್ಮ ಸರ್ಕಾರ ಪಾರದರ್ಶಕವಾಗಿದೆ. ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನಮ್ಮ ಬಗ್ಗೆ ಮಾತನಾಡಲು ಜೆಡಿಎಸ್, ಕಾಂಗ್ರೆಸ್ ನವರಿಗೆ ನೈತಿಕತೆ ಇಲ್ಲ. ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಹೋಟೆಲ್ ನಲ್ಲಿ ಆಡಳಿತ ಮಾಡಿದ್ದಾರೆ. ಅವರಿಂದ ನಾವು ಪಾಠ ಕಲಿಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ