Kannada NewsKarnataka NewsLatestPolitics

*ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೆಷ್ಟು ದಿನ ಬೇಕು ಸಿಎಂ ಸಿದ್ದರಾಮಯ್ಯನವರೇ ? ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಯಲಿ ಅಂತಾ wait ಮಾಡ್ತಿದೀರಾ? ಆರ್.ಅಶೋಕ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಳಲ್ಲಿ ಬ್ಯುಸಿಯಾಗಿರುವುದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ ಆರಂಭವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೂ ಎಷ್ಟು ದಿನ ಬೇಕು ಸ್ವಾಮಿ? ಹೈಕಮಾಂಡ್ ಏಜೆಂಟ್ ಕೆ.ಸಿ.ವೇಣುಗೋಪಾಲ್ ಆದೇಶಕ್ಕೆ ಕಾಯ್ತಾ ಇದೀರಾ? ಅಥವಾ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಯಲಿ ಅಂತಾ wait ಮಾಡ್ತಾ ಇದೀರಾ? ಎಂದು ಪ್ರಶ್ನಿಸಿದ್ದಾರೆ.

ರೈತರ ಕಷ್ಟಕ್ಕೆ ಸ್ಪಂದಿಸದ ನಿಮ್ಮಂಥವರಿಗೆ ಯಾಕೆ ಸ್ವಾಮಿ ಅಧಿಕಾರ, ಕುರ್ಚಿ? ಜನ ಈ ನಾಲಾಯಕ್ ಸರ್ಕಾರವನ್ನ ಹಾದಿ ಬೀದಿಯಲ್ಲಿ ಛೀ ಥೂ ಅಂತ ಉಗಿಯುತ್ತಿದ್ದಾರೆ, ಶಾಪ ಹಾಕುತ್ತಿದ್ದಾರೆ. ಅನ್ನದಾತರು ದಿನನಿತ್ಯ ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿರುವ ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ಅವರ ನೋವಿನ ಶಾಪ ತಟ್ಟದೇ ಇರದು ಎಂದು ಕಿಡಿಕಾರಿದ್ದಾರೆ.

Home add -Advt

Related Articles

Back to top button