Uncategorized

*ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯನವರೇ ನೇರ ಹೊಣೆ; ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿದ್ದರಾಮಯ್ಯನವರ ಯೋಜನೆಯಲ್ಲಿ ಯಾವುದೇ ಸ್ಪಷ್ಟನೆ ಇಲ್ಲ. ಕಾಂಗ್ರೆಸ್ ಸರ್ಕಾರದ ನಿರ್ಧಾರಗಳಿಂದಾಗಿ ಜನ ಗೊಂದಲದಲ್ಲಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಆರ್.ಅಶೋಕ್, ಅಕ್ಕಿ ಕೊಡಲು ಸಾಧ್ಯವಾಗದೇ ವಿಷಯಾಂತರ ಮಾಡಲು ಪ್ರಧಾನಿ ಮೋದಿ ಮೇಲೆ ಕಾಂಗ್ರೆಸ್ ನವರು ಆರೊಪ ಮಾಡುತ್ತಿದ್ದಾರೆ. ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕೇಳಿ ಅಂತಾರೆ. ಮೋದಿ ಟೊಮ್ಯಾಟೊ ಬೆಲೆ ಏರಿಕೆ ಮಾಡಿದ್ದಾರಾ? ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯನವರ ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಇರಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button