Kannada NewsKarnataka NewsLatest
*ಇಲ್ಲಿ ಹನಿ ನೀರಿಗೂ ಜನರ ಪರದಾಟ; ಅಲ್ಲಿ ಸದ್ದಿಲ್ಲದೇ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಕಾಂಗ್ರೆಸ್ ಸರ್ಕಾರ; ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ತೀವ್ರ ಬರ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಇದನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿವೆ.
ಬೆಂಗಳೂರಿನ ಜನ ಹನಿ ನೀರಿಗೂ ಪರದಾಡುತ್ತಿದ್ದರೆ, ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಅಲ್ಲಿ ಸದ್ದಿಲ್ಲದೆ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ನೀರಿನ ಅಭಾವ ಇದ್ದರೆ ಟ್ಯಾಂಕರ್ ಮಾಫಿಯಾ ಮೂಲಕ ಇನ್ನಷ್ಟು ಲೂಟಿ ಹೊಡೆಯಬಹುದು ಎನ್ನುವ ಹುನ್ನಾರವೇನಾದರೂ ನಡೆದಿದೆಯೇ ಸಿಎಂ ಸಿದ್ದರಾಮಯ್ಯನವರೇ? ಅಥವಾ ತಮಿಳುನಾಡಿನ I.N.D.I ಮಿತ್ರ ಪಕ್ಷ ಡಿಎಂಕೆ ಜೊತೆ ಸೀಟು ಹಂಚಿಕೆ ಕುದುರಿಸಲು ಕಾವೇರಿ ನೀರು ಹಂಚಿಕೆಯ ಡೀಲ್ ನಡೆದಿದೆಯೋ ಡಿಸಿಎಂ
ಡಿ.ಕೆ.ಶಿವಕುಮಾರ್ ಅವರೇ? ಎಂದು ಪ್ರಶ್ನಿಸಿದ್ದಾರೆ.