Latest

*ಸಚಿವ ಆರ್.ಅಶೋಕ್,ವಿ.ಸೋಮಣ್ಣಗೆ 2 ಕ್ಷೇತ್ರಗಳಲ್ಲಿ ಟಿಕೆಟ್; ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಕಟ್ಟಿಹಾಕಲು ಬಿಜೆಪಿ ಪ್ಲಾನ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 189 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಬಿಜೆಪಿಯ ಇಬ್ಬರು ಸಚಿವರಿಗೆ ಎರಡು ಕ್ಷೇತ್ರಗಳ ಟಿಕೆಟ್ ನೀಡಿದೆ.

Related Articles

ಸಚಿವರಾದ ಆರ್.ಅಶೋಕ್ ಹಾಗೂ ವಿ.ಸೋಮಣ್ಣ ಅವರಿಗೆ ಎರಡು ಕ್ಷೇತ್ರಗಳ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಅವರನ್ನು ಕನಕಪುರದಲ್ಲಿ ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ ಸಚಿವ ಆರ್,ಅಶೋಕ್ ಅವರನ್ನು ಕನಕಪುರ ಹಾಗೂ ಪದ್ಮನಾಭನಗರ ಎರಡೂ ಕ್ಷೇತ್ರಗಳಿಂದ ಅಖಾಡಕ್ಕಿಳಿಸಿದೆ.

ಇನ್ನು ವರುಣಾದಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಿದ್ದು, ಸೋಮಣ್ಣ ಅವರಿಗೆ ವರುಣಾ ಹಾಗೂ ಚಾಮರಾಜನಗರ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡಲಾಗಿದೆ.

Home add -Advt
https://pragati.taskdun.com/vidhanasabha-electiinbjp-candidate-listrelease/

Related Articles

Back to top button