Kannada NewsKarnataka NewsLatestPolitics

*ರಾಜ್ಯ ಬಿಜೆಪಿ ನಾಯಕರನ್ನು ಹೈಕಮಾಂಡ್ ಹತ್ತಿರಕ್ಕೂ ಬಿಟ್ಟುಕೊಂಡಿಲ್ಲ; ಸಚಿವ ಆರ್.ಬಿ.ತಿಮ್ಮಾಪುರ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ರಾಜ್ಯ ಬಿಜೆಪಿ ನಾಯಕರನ್ನು ಹೈಕಮಾಂಡ್ ತಿರಸ್ಕರಿಸಿದೆ. ಪ್ರಧಾನಿ ಮೋದಿಯವರಾಗಲಿ, ಅಮಿತ್ ಶಾ ಅವರಗಾಲಿ ರಾಜ್ಯ ಬಿಜೆಪಿ ನಾಯಕರನ್ನು ಕಚೇರಿ ಒಳಗೂ ಬಿಟ್ಟುಕೊಳ್ಳುತ್ತಿಲ್ಲ ಎಂದು ಸಚಿವ ಆರ್.ಬಿ.ತಿಮ್ಮಾಪುರ ಟಾಂಗ್ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ,ಬಿಜೆಪಿ ಹೈಕಮಾಂಡ್ ಈವರೆಗೂ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿಲ್ಲ. ರಾಜ್ಯ ಬಿಜೆಪಿ ನಾಯಕರನ್ನು ಹೈಕಮಾಂಡ್ ಹತ್ತಿರಕ್ಕೂ ಬಿಟ್ಟುಕೊಳ್ಳುತ್ತಿಲ್ಲ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ರಾಜ್ಯ ಬಿಜೆಪಿ ನಾಯಕರನ್ನು ಕಚೇರಿ ಒಳಗೂ ಬಿಟ್ಟುಕೊಳ್ಳುತ್ತಿಲ್ಲ. ಇದರಿಂದಾಗಿ ರಾಜ್ಯ ಬಿಜೆಪಿ ನಾಯಕರು ಹತಾಶರಾಗಿದ್ದಾರೆ ಎಂದು ಹೇಳಿದರು.

ನಮ್ಮನ್ನು ಕರೆದು ವಿಪಕ್ಷ ನಾಯಕರನ್ನಾಗಿ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಆರ್.ಎಸ್.ಎಸ್ ನಾಯಕರನ್ನು ಮೆಚ್ಚಿಸಲು ರಾಜ್ಯ ನಾಯಕರು ಹಾದಿ ಬೀದಿಗಳಲ್ಲಿ ಕಿರುಚಾಡುತ್ತಿದ್ದಾರೆ. ಆದರೂ ಹೈಕಮಾಂಡ್ ಇವರನ್ನು ಕರೆಯುತ್ತಿಲ್ಲ. ಇದು ರಾಜ್ಯ ಬಿಜೆಪಿ ನಾಯಕರ ಸ್ಥಿತಿ ಎಂದು ವ್ಯಂಗ್ಯವಾಡಿದ್ದಾರೆ.

Home add -Advt

Related Articles

Back to top button