
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಹೃದಯಾಘಾತದಿಂದ ನಿನ್ನೆ ವಿಧಿವಶರಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಪೊಲೀಸ್ ಗೌರವಗಳೊಂದಿಗೆ ನೆರವೇರಿತು.

ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಬಳಿ ತೋಟದಲ್ಲಿ ತಂದೆ-ತಾಯಿ ಸಮಾಧಿ ಪಕ್ಕದಲ್ಲಿಯೇ ಧ್ರುವನಾರಾಯಣ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪುತ್ರರಾದ ದರ್ಶನ್, ಧೀರನ್ ಪಾರ್ಥಿವಶರೀರಕ್ಕೆ ಅಂತಿಮ ವಿಧಿವಿಧಾನ ಸಲ್ಲಿಸಿದರು. ಬಳಿಕ ಪೊಲಿಸ್ ಗೌರಗಳೊಂದಿಗೆ ಧ್ರುವನಾರಾಯಣ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತ್ಯಕ್ರಿಯೆಗೂ ಮುನ್ನ ಧ್ರುವನಾರಾಯಣ ಅವರ ಪುತ್ರ ದರ್ಶನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಬೆಂಬಲಿಗರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಅಂತ್ಯಕ್ರಿಯೆಯಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.


