
ಪ್ರಗತಿವಾಹಿನಿ ಸುದ್ದಿ; ಮೈಸೂರು: ಇತ್ತೀಚೆಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ ಕಾಂಗ್ರೆಸ್ ನಾಯಕ ದಿ.ಆರ್.ಧ್ರುವನಾರಾಯಣ ಅವರ ಪತ್ನಿ ವೀಣಾ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ವೀಣಾ ಅವರು ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗೆ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಆ ದು:ಖ ಮಾಸುವ ಮುನ್ನವೇ ಈಗ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಧ್ರುವನಾರಾಯಣ ಅವರ ಪತ್ನಿ ಕೂಡ ಸಾವನ್ನಪ್ಪಿದ್ದಾರೆ.
ವೀಣಾ ಧ್ರುವನಾರಾಯಣ ಅವರ ಪುತ್ರ ದರ್ಶನ್ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆ ಅಖಾಡಕ್ಕಿಳಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ