Latest

ಆತ್ಮೀಯ ಸ್ನೇಹಿತನ ಹಠಾತ್ ನಿಧನ ನೋವು ತಂದಿದೆ; ಸಿಎಂ ಬೊಮ್ಮಾಯಿ ಕಂಬನಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಆತ್ಮೀಯ ಸ್ನೇಹಿತರಾಗಿದ್ದ ಧ್ರುವನಾರಾಯಣ್ ಅವರ ಏಕಾಏಕಿ ನಿಧನ ಆಘಾತವನ್ನುಂಟುಮಾಡಿದೆ ಎಂದು ಕಂಬನಿ ಮಿಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧ್ರುವನಾರಾಯಣ ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿಪಕ್ಷದಲ್ಲಿದ್ದರೂ ಕೂಡ ನನ್ನ ಜೊತೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಬಾರಿ ಚರ್ಚೆ ನಡೆಸಿದ್ದರು. ಬಡ ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹೇಳಿದ್ದರು. ಜನಪರ ಕಾಳಜಿ ಹೊಂದಿದ್ದ ಉತ್ತಮ ರಾಜಕಾರಣಿಯಾಗಿದ್ದವರು. ಸಂಸತ್ತಿನಲ್ಲಿ ಅವರು ಮಾಡಿದ ಭಾಷಣ ಇಡೀ ರಾಜ್ಯಕ್ಕೆ ಸ್ಪೂರ್ತಿದಾಯಕವಾಗಿತ್ತು. ಅವರ ಅಗಲಿಕೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ದು:ಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಧ್ರುವನಾರಾಯಣ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

Home add -Advt

Related Articles

Back to top button