National
*ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ: ಕೋಲ್ಕತ್ತಾ ನ್ಯಾಯಾಲಯದಿಂದ ತೀರ್ಪು ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.
ಪ್ರಕರಣ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ನ್ಯಾ.ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದಾರೆ. ಅಪರಾಧಿಗೆ ಜನವರಿ 20ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ