Latest

ಆರ್.ಪಿ.ಶರ್ಮಾ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನಿವೃತ್ತ ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ  ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಕಳೆದ ಡಿಸೆಂಬರ್ ತಿಂಗಳಲ್ಲಿ ಅವರು ಸೇವಾ ನಿವೃತ್ತಿ ಹೊಂದಿದ್ದರು.

Home add -Advt

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು, ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಅವರ ಪತ್ನಿ ನಾಗಲಾಂಬಿಕಾ ದೇವಿ ಐಎಎಸ್ ಅಧಿಕಾರಿ. ಅವರಿಗೆ ಇಬ್ಬರು ಗಂಡುಮಕ್ಕಳಿದ್ದಾರೆ.

ಕೆಲವು ತಿಂಗಳ ಹಿಂದೆ ಗನ್ ಕ್ಲೀನ್ ಮಾಡುವಾಗ ಗುಂಡು ಸಿಡಿದು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆದ ಬಳಿಕ ಅವರು ಕ್ಯಾನ್ಸರ್ ರೋಗದಿಂದ ತೀವ್ರ ಅಸ್ವಸ್ಥರಾಗಿದ್ದರು. ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದರು.

ಹಲವಾರು ಕಠಿಣ ಕ್ರಮಗಳಿಂದ ಜನಪ್ರಿಯರಾಗಿದ್ದ ಶರ್ಮಾ, ಹುದ್ದೆಯುದ್ದಕ್ಕೂ ವಿವಾದಗಳನ್ನು ಮೈಮೇಲೆಳೆದುಕೊಂಡೇ ಕೆಲಸ ಮಾಡಿದ್ದರು.

Related Articles

Back to top button