Latest

ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದ ತುಳಸಿ ಮುನಿರಾಜು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್.ಆರ್ ನಗರ ಉಪಚುನಾವಣೆ ಬಿಜೆಪಿ ಟಿಕೆಟ್ ಬಗ್ಗೆ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ಈ ಬಗ್ಗೆ ಯಾವುದೇ ಗೊಂದಲಗಳಿಲ್ಲ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ತುಳಸಿ ಮುನಿರಾಜು ತಿಳಿಸಿದ್ದಾರೆ.

ಮುನಿರತ್ನ ಅಕ್ರಮವಾಗಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ನಲ್ಲಿ ತಾವು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಆರ್.ಆರ್ ನಗರ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ತುಳಸಿ ಮುನಿರಾಜು, ಸುಪ್ರೀಂ ತೀರ್ಪಿಗೆ ನಾನು ತಲೆಬಾಗಲೇಬೇಕು. ವರಿಷ್ಠರು ನೀಡುವ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

ಈಗಾಗಲೇ ಬಿಜೆಪಿ ನಾಯಕರನ್ನು ನಾನು ಭೇಟಿಆಗಿ ಚರ್ಚಿಸಿದ್ದು, ಅವರ ಸೂಚನೆಯಂತೆ ನಡೆಯುತ್ತೇನೆ. ನಾನು ಹಾಗೂ ಮುನಿರತ್ನ ಈಗ ಒಂದೇ ಪಕ್ಷದಲ್ಲಿ ಇದ್ದೇವೆ. ಹಾಗಾಗಿ ನಮಗೆ ಪಕ್ಷದ ಗೆಲುವು ಮುಖ್ಯ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button