
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಹೆಚ್ಚುವರಿ ಡಿಸಿಎಂ ಕೇಳುವವರ ಮೇಲೆ ಹೈಕಮಾಂಡ್ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸಿಎಂ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ದೆಹಲಿಗೆ ಹೋಗಿದ್ದಾರೆ. ಬೆಳಗ್ಗೆ ನಾನೇ ಅವರ ಜೊತೆಗೆ ಮಾತನಾಡಿದ್ದೇನೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ಡಿಸಿಎಂ ಚರ್ಚೆಯ ಬಗ್ಗೆ ಮಾತನಾಡಲು ಕಾಯಿಪಲ್ಲೆ ಮಾರ್ಕೇಟ್ ಅಲ್ಲ. ಹಾದಿ ಬೀದಿಯಲ್ಲಿ ಮಾತನಾಡುವವರ ವಿರುದ್ಧ ಹೈಕಮಾಂಡ್ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದರು.
ನಾನು ಪಕ್ಷದ ಶಿಸ್ತಿನ ಸಿಪಾಯಿ. ಯುವ ಘಟಕದ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಮಾಧ್ಯಮದವರ ಮುಂದೆ ವಿನಾಕಾರಣ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಮಾಧ್ಯಮಗಳ ಮುಂದೆ ಮಾತನಾಡುವವರು ಎಚ್ಚರಿಕೆಯಿಂದ ಇರಬೇಕು. ಅನಾವಶ್ಯಕ ಚರ್ಚೆಗಳನ್ನು ಮಾಡಬಾರದು. ನಿಮ್ಮ ಪಕ್ಷವನ್ನು ನೀವೆ ಹಾಳು ಮಾಡಿದಂತಾಗುತ್ತದೆ. ಜನರ ಕಲ್ಯಾಣಕ್ಕಾಗಿ ಚರ್ಚೆ ನಡೆಸಿ ಎಂದು ಕಿವಿಮಾತು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ