Film & EntertainmentKannada NewsKarnataka NewsLatest

*ಅಧಿಕಾರಿ ಮೇಲೆ ಹಲ್ಲೆ ನಡೆಸಿದ ರಚಿತಾ ರಾಮ್ ಕಾರು ಚಾಲಕ*

ಪ್ರಗತಿವಾಹಿನಿ ಸುದ್ದಿ: ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.‌

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ (ಫೆಬ್ರವರಿ 15) ಭದ್ರತಾ ನೆಪದಲ್ಲಿ ರಚಿತಾ ರಾಮ್‌ ಕಾರು ಚಾಲಕ ಹಲ್ಲೆ ನಡೆಸಿದ್ದಾನೆ.

ನಟಿ ರಚಿತಾ ರಾಮ್ ಅವರ ಕಾರು ಚಾಲಕ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿದ್ದಾನೆ. ಜನರನ್ನು ದೂರ ಸರಿಸುತ್ತಿದ್ದ, ಇದೇ ವೇಳೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾನೆ.

ಇದರಿಂದ ಅಧಿಕಾರಿ ರವಿಕುಮಾರ್ ಕಣ್ಣಿಗೆ ಗಾಯವಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button