
ಪ್ರಗತಿವಾಹಿನಿ ಸುದ್ದಿ; ಜೈಪುರ: 24 ಗಂಟೆಯಲ್ಲಿ 9 ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ ಆಸ್ಪತ್ರೆಯಲ್ಲಿ ನಡೆದಿದೆ.
ಹುಟ್ಟಿದ ಮೊದಲದಿನದಿಂದ 5 ದಿನಗಳ ಒಳಗಿನ 9 ನವಜಾತ ಶಿಶುಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ ನಿರ್ಲಕ್ಷಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ನವಜಾತ ಶಿಶುಗಳ ಸಮರ್ಪಕ ಆರೈಕೆ ಮಾಡದ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಘಟನೆ ಕುರಿತು ಮಕ್ಕಳ ವಿಭಾಗದ ಮುಖ್ಯಸ್ಥರು ತನಿಖೆ ಕೈಗೊಂಡಿದ್ದಾರೆ.