Kannada NewsKarnataka NewsLatestPolitics

*ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಗರಣ; CBI ತನಿಖೆಗೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣವನ್ನು CBI ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.

ಈ ಬ್ಯಾಂಕ್ ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ, ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು.

Home add -Advt

ಮೂರೂ ಬ್ಯಾಂಕ್ ಗಳ ಠೇವಣಿದಾರರು ನಡೆಸಿದ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರಾಗಿ ಬೆಂಬಲ ಸೂಚಿಸಿದ್ದರು.

Related Articles

Back to top button